CrimeNational

ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನ ಹುಚ್ಚಾಟ

ಬೆಂಗಳೂರು; ಇಂಡಿಗೋ ವಿಮಾನದಲ್ಲಿ ಕಂಠಪೂರ್ತಿ ಕುಡಿದಿದ್ದ ಪ್ರಯಾಣಿಕನೊಬ್ಬ ಹುಚ್ಚಾಟ ನಡೆಸಿದ್ದಾನೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನ ಹಾರುತ್ತಿರುವಾಗಲೇ ಕುಡುಕ ಪ್ರಯಾಣಿಕ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಪ್ರಯತ್ನ ಮಾಡಿದ್ದಾನೆ. 

ನಿನ್ನೆ ಬೆಳಗ್ಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ಬೆಳಗ್ಗೆ 7:56ರ ಸುಮಾರಿಗೆ ಇಂಡಿಗೋ ವಿಮಾನ ಸಂಖ್ಯೆ 6E 308 ರಲ್ಲಿ ಈ ಘಟನೆ ನಡೆದಿದೆ. ಪ್ರತೀಕ್ (40) ಎಂಬಾತ ಹುಚ್ಚಾಟ ನಡೆಸಿದ್ದು,  ತಕ್ಷಣ ಎಚ್ಚೆತ್ತ  ಸಿಬ್ಬಂದಿ ಕ್ಯಾಪ್ಟನ್‌ಗೆ ಮಾಹಿತಿ ಕೊಟ್ಟಿದ್ದಾರೆ. ಆತನನ್ನು ತಡೆದು, ವಿಮಾನ ಬೆಂಗಳೂರಿಗೆ ಬಂದಿಳಿದ ಬಳಿಕ ಸಿಐಎಸ್‌ಎಫ್ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಯಾಣಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

 

Share Post