ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ಬೈ; ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ಬೆಂಗಳೂರು; ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಈ ನಡುವೆ ಅವರನ್ನು ಕಾಂಗ್ರೆಸ್ ಸೆಳೆಯಲು ಪ್ರಯತ್ನಿಸುತ್ತಿದೆ. ಮಾಹಿತಿ ಪ್ರಕಾರ ಸವದಿ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಲಕ್ಷ್ಮಣ ಸವದಿಯವರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಜೊತೆಯಲ್ಲಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬಹುತೇಕ ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗುತ್ತಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸವದಿಯವರನ್ನು ಸೆಳೆದಿದ್ದಾರೆ. ಕಾಂಗ್ರೆಸ್ ಸೇರಲು ಅವರು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಇದೇ ವೇಳೆ ಲಕ್ಷ್ಮಣ ಸವದಿ ಮಾತನಾಡಿದ್ದಾರೆ. ಬಿಜೆಪಿ ನಾಯಕರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ನಾನು ಅತ್ಯಾಚಾರ ಮಾಡಿದ್ನಾ..? ನಾನು ಏನು ತಪ್ಪು ಮಾಡಿದ್ದೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಹೇಳಿದರು.