BengaluruPolitics

ಅಥಣಿ ಟಿಕೆಟ್‌ ನೀಡಲು ಕಾಂಗ್ರೆಸ್‌ ಒಪ್ಪಿದೆ; ಲಕ್ಷ್ಮಣ ಸವದಿ

ಬೆಂಗಳೂರು; ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ನನ್ನ ಬೇಡಿಕೆಗಳಿಗೆ ಒಪ್ಪಿದ್ದಾರೆ. ಹೀಗಾಗಿ ನಾನು ಕಾಂಗ್ರೆಸ್‌ ಸೇರುತ್ತಿದ್ದೇನೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಸಿದ್ದರಾಮಯ್ಯ ನಿವಾಸದ ಬಳಿ ಮಾತನಾಡಿದ ಅವರು, ಸಂಜೆ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅನಂತರ ಕಾಂಗ್ರೆಸ್‌ ಸೇರ್ಪಡೆಯಾಗುತ್ತೇನೆ ಎಂದು ಹೇಳಿದರು.

ನನಗೆ ಅಥಣಿ ಕ್ಷೇತ್ರದ ಟಿಕೆಟ್‌ ನೀಡಬೇಕು ಹಾಗೂ ನನ್ನ ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಅನುದಾನ ನೀಡಬೇಕು ಎಂದು ಕೇಳಿದ್ದೇನೆ. ಇದಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಒಪ್ಪಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ. ಬಿಜೆಪಿ ಕೊಟ್ಟ ಮಾತು ತಪ್ಪಿದೆ. ಈ ಕಾರಣಕ್ಕಾಗಿ ಕಾಂಗ್ರೆಸ್‌ ಸೇರುತ್ತಿರುವುದಾಗಿಯೂ ಸವದಿ ಹೇಳಿದ್ದಾರೆ.

Share Post