ಗ್ಯಾಂಗ್‌ಸ್ಟರ್ ಅತೀಕ್ ಹಾಗೂ ಆತನ ಸಹೋದರನ ಕೊಲೆ
ಪ್ರಯಾಗ್‌ರಾಜ್; ಗ್ಯಾಂಗ್‌ಸ್ಟರ್ ಹಾಗೂ ಮಾಜಿ ಸಂಸದ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗ ಪತ್ರಕರ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಈ ಕೃತ್ಯ ಎಸಗಲಾಗಿದೆ. ಬಿಗಿ ಭದ್ರತೆಯ ನಡುವೆಯೂ ಈ ಕೃತ್ಯ ಎಸಗಲಾಗಿದೆ. ಪೊಲೀಸರು ಮೂವರೂ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಿಎಸ್‌ಪಿಯ ಮಾಜಿ ಶಾಸಕ ರಾಜು ಪಾಲ್ ಅವರ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಇವರಿಬ್ಬರೂ ಆರೋಪಿಗಳಾಗಿದ್ದರು.
ಇನ್ನು ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಪುತ್ರ ಅಸಾದ್ ಹಾಗೂ ಆತನ ಸಹಚರ ಗುಲಾಮ್‌ನನ್ನು ಝಾನ್ಸಿಯಲ್ಲಿ ಇತ್ತೀಚೆಗಷ್ಟೇ ಪೊಲೀಸರು ಎನ್‌ಕೌಂಟರ್ ಮಾಡಿದ್ದರು. ಇದಾದ ಎರಡು ದಿನದಕ್ಕೆ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನ ಕೊಲೆಯಾಗಿದೆ.