ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶೆಟ್ಟರ್; ಕಾಂಗ್ರೆಸ್ ಸೇರುವ ಸಾಧ್ಯತೆ
ಶಿರಸಿ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿರುವ ಸ್ಪೀಕರ್ ಕಾಗೇರಿ ಕಚೇರಿಗೆ ಭೇಟಿ ನೀಡಿದ್ದ ಶೆಟ್ಟರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇನ್ನು ಶಾಸಕ ಸ್ಥಾನಕ್ಕೂ ಅವರು ರಾಜೀನಾಮೆ ನೀಡಿದ್ದು, ಶೀಘ್ರದಲ್ಲೇ ಮುಂದಿನ ತೀರ್ಮಾನ ಪ್ರಕಟಿಸಲಿದ್ದಾರೆ. ಶೆಟ್ಟರ್ ಅವರು ಕಾಂಗ್ರೆಸ್ ಸೇರಿ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಕಾಂಗ್ರೆಸ್ ನಾಯಕರು ಶೆಟ್ಟರ್‌ಗೆ ಆಹ್ವಾನ ನೀಡಿದ್ದಾರೆ. ಜೊತೆಗೆ ಪ್ರತಿನಿಧಿಯೊಬ್ಬರನ್ನೂ ಮಾತುಕತೆಗೆ ಕಳುಹಿಸಿದ್ದಾರೆ.
ಶೆಟ್ಟರ್ ಅವರು ಬೆಮಭಲಿಗರ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ. ಇನ್ನು ಶೆಟ್ಟರ್ ರಾಜೀನಾಮೆ ನೀಡುತ್ತಿದ್ದಂತೆ ಡ್ಯಾಮೇಜ್ ಕಂಟ್ರೋಲ್ ಮಾಡೋದಕ್ಕಾಗಿ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದಾರೆ.