ಆಂಧ್ರ ಸಿಎಂ ಜಗನ್ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಅರೆಸ್ಟ್
ಕಡಪ; ಆಂಧ್ರ ಸಿಎಂ ಜಗನ್ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣ ಸಂಬಂಧ ಅವರ ಮತ್ತೊಬ್ಬ ಚಿಕ್ಕಪ್ಪ ವೈ.ಎಸ್.ಭಾಸ್ಕರ್ ರೆಡ್ಡಿಯನ್ನು ಬಂಧಿಸಲಾಗಿದೆ. ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ ಭಾಸ್ಕರ್ ರೆಡ್ಡಿಯವರನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ/
ಕಡಪ ಸಂಸದರಾಗಿದ್ದ ವಿವೇಕಾನಂದರೆಡ್ಡಿಯವರನ್ನು 2019ರ ಮಾರ್ಚ್ 15 ರಂದು ಪುಲಿವೆಂಧುಲದ ನಿವಾಸದಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು 2020ರಲ್ಲಿ ಸಿಬಿಐಗೆ ಹಸ್ತಾಂತರಿಸಲಾಗಿತ್ತು.