BengaluruPolitics

ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬೆಂಗಳೂರು; ಜನಸಂಘದಿಂದ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಬಾವುಟ ನೀಡಿ ಕಾಂಗ್ರೆಸ್ ಗೆ ಬರಮಾಡಿಕೊಂಡರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶೆಟ್ಟರ್‌ ಕಾಂಗ್ರೆಸ್‌ ಸೇರಿದರು. ಮಲ್ಲಿಕಾರ್ಜುನ ಖರ್ಗೆ ಅವರು ಶೆಟ್ಟರ್‌ಗೆ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.

Share Post