ಬಿಜೆಪಿ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು; ಕಾಂಗ್ರೆಸ್ ನವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು. ಆದರೆ ಬಿಜೆಪಿಯ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲ ನಾಯಕರು ಪಕ್ಷ ಬಿಟ್ಟು ಹೋಗಿದ್ದರಿಂದ ನಮ್ಮ ಮತ ಬ್ಯಾಂಕ್ಗೆ ಯಾವುದೇ ನಷ್ಟ ಇಲ್ಲ ಎಂದು ಹೇಳಿದರು.
ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ ಎಂದರು. ಶೆಟ್ಟರ್ ಅವರು ಮಾಡಿರುವ ಆರೋಪದ ಬಗ್ಗೆ ಮಾತನಾಡಿ ಯಾರಾದರೂ ಪಕ್ಷ ಬಿಟ್ಟು ಹೋದಾಗ ಏನಾದರೂ ಒಂದು ಕಾರಣ ಕೊಡಬೇಕು. ಕಳೆದ 25 ವರ್ಷದ ಅವರ ರಾಜಕೀಯ ಜೀವನದಲ್ಲಿ ಬಿಜೆಪಿ ಶೆಟ್ಟರ್ ಗೆ ಎಲ್ಲವನ್ನೂ ಕೊಟ್ಟಿದೆ.
ಅವರನ್ನ ಕಡೆಗಣಿಸುವ ಪ್ರಶ್ನೆಯೇ ಇಲ್ಲ.ಹೋಗಿದ್ದಾರೆ ಅದಕ್ಕೊಂದು ನೆಪ ಅಷ್ಟೇ ಎಂದರು.