BengaluruPolitics

ಲಿಂಗಾಯತ ಸಿಎಂ ಘೋಷಣೆ ಬಗ್ಗೆ ನಿರ್ಣಯ ಆಗಿಲ್ಲ; ಸಿಎಂ ಬೊಮ್ಮಾಯಿ

ಬೆಂಗಳೂರು; ಲಿಂಗಾಯತ ಸಿಎಂ ಅಭ್ಯರ್ಥಿ ಬಗ್ಗೆ ಯಾವುದೇ ಘೋಷಣೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ನೇತೃತ್ವದಲ್ಲಿ ಲಿಂಗಾಯತ ನಾಯಕರ ಸಭೆ ನಡೆದ ಕುರಿತು ಮಾತನಾಡಿದರು.

ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ಆಗಿದೆ. ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರೂ ಇದ್ದರು. ಸಭೆಯಲ್ಲಿ ವ್ಯಕ್ತವಾಗಿರುವ ಭಾವನೆಗಳನ್ನು ವರಿಷ್ಠರಿಗೆ ತಿಳಿಸುವುದಾಗಿ ಹೇಳಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ. ಇನ್ನು ಅಶೋಕ್ ಅವರಿಗೆ ಕನಕಪುರದಲ್ಲಿ ಮಿಲಿಟರಿ ಹೊಟೇಲ್ ಗೆ ಬಂದು ಹೋಗಿ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಉತ್ತರಿಸಿದ ಸಿಎಂ, ನಮ್ಮ ಪ್ರಚಾರ ಮಿಲಿಟರಿ ಹೊಟೇಲಿಂದಲೇ ಆರಂಭವಾಗಲಿದೆ. ಅಲ್ಲಿ ಸ್ಥಳೀಯ ಸಾಮಾನ್ಯ ಜನರಿರುತ್ತಾರೆ. ಅಂಥ ಸಾಮಾನ್ಯ ಜನರನ್ನು ಡಿಕೆಶಿ ಭೇಟಿ ಮಾಡುವುದಿಲ್ಲ. ಸಾಮಾನ್ಯ ಜನರನ್ನು ಭೇಟಿ ಮಾಡಲು ಅಶೋಕ್ ತೆರಲಿದ್ದಾರೆ ಎಂದರು.

ಇನ್ನು ನಾಮಪತ್ರ ಪ್ರಕ್ರಿಯೆ ಮುಗಿದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಬರಲಿದ್ದು, ಪ್ರಚಾರ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.   ಕಾಂಗ್ರೆಸ್ ನದ್ದು ಲಿಂಗಾಯತ ವಿರೋಧಿ ನಡೆ, 1967 ರಿಂದ ಈ ವರೆಗೆ 50 ವರ್ಷದಲ್ಲಿ ಒಬ್ಬ ಲಿಂಗಾಯತರನ್ನು ಕಾಂಗ್ರೆಸ್ ಸಿಎಂ ಮಾಡಿಲ್ಲ. ಮಧ್ಯೆ ವಿರೇಂದ್ರ ಪಾಟೀಲರು ಒಂಭತ್ತು ತಿಂಗಳು ಮುಖ್ಯಮಂತ್ರಿಗಳಾಗಿದ್ದರೂ, ವಿರೇಂದ್ರ ಪಾಟೀಲರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಸಿಎಂ ಬೊಮ್ಮಾಯಿ ಆರೋಪ ಮಾಡಿದರು.

 

Share Post