BengaluruPolitics

ಏಪ್ರಿಲ್‌ 29ರಿಂದ ಮೋದಿ ಪ್ರಚಾರ; 20 ಕಡೆ ರೋಡ್‌ ಶೋ, ಸಭೆ

ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದಲ್ಲಿ ನಾಮಪತ್ರ ಪ್ರಕ್ರಿಯೆ ಮುಗಿದ ಬಳಿಕ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಮೊದಲಿಗೆ ಮೋದಿಯವರು ಏಪ್ರಿಲ್‌ 27ರಂದು ರಾಜ್ಯ ಜನರನ್ನುದ್ದೇಶಿಸಿ ಆನ್‌ಲೈನ್‌ ಭಾಷಣ ಮಾಡಲಿದ್ದಾರೆ. ಈ ಭಾಷಣವನ್ನು ನೋಡುವುದಕ್ಕಾಗಿ ರಾಜ್ಯ 5 ಸಾವಿರ ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಇನ್ನು ಏಪ್ರಿಲ್‌ 29ರಿಂದ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಸುಮಾರು 20 ಕಡೆ ಅವರು ರೋಡ್‌ ಶೋ, ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ. ಹತ್ತು ಕ್ಷೇತ್ರಗಳ ಜನರು ಒಂದು ಕಡೆ ಸೇರುವಂತೆ ಮಾಡಿ ಮೋದಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮೋದಿಯವರು 180 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಏಪ್ರಿಲ್‌ 29ರಂದು ಬೀದರ್, ದಾವಣಗೆರೆ, ಚಿತ್ರದುರ್ಗ, ಬೆಂಗಳೂರಿನಲ್ಲಿ ನಡೆಸುವ ಸಾರ್ವಜನಿಕ ಸಭೆಗಳಲ್ಲಿ ಭಾಷಣ ಮಾಡಲಿದ್ದಾರೆ. ಈ ಸ್ಥಳಗಳ ಸುತ್ತಮುತ್ತಲ ಹತ್ತು ವಿಧಾನಸಭಾ ಕ್ಷೇತ್ರಗಳ ಜನರನ್ನು ಅಲ್ಲಿ ಸೇರಿಸಲಾಗುತ್ತದೆ ಎಂದು ತಿಳಿದುಬಂದಿದೆ.

Share Post