BengaluruPolitics

ಕಿರುಕುಳ ಆರೋಪ; ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ಗೆ ಬಂಧನದ ಭೀತಿ

ಬೆಂಗಳೂರು; ಚುನಾವಣೆ ಸಮಯದಲ್ಲೇ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ಗೆ ಕಾನೂನು ಸಂಕಷ್ಟ ಎದುರಾಗಿದೆ.  ಅಸ್ಸಾಂ ಯುವ ಕಾಂಗ್ರೆಸ್‌ ಅಧ್ಯಕ್ಷೆ ಅಂಕಿತಾಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶ್ರೀನಿವಾಸ್‌ ಅವರನ್ನು ಪೊಲೀಸರು ಹುಡುಕುತ್ತಿದ್ದಾರೆ. ಅಸ್ಸಾಂ ಪೊಲೀಸರು ಬೆಂಗಳೂರಿಗೆ ಆಗಮಿಸಿದ್ದು, ಶ್ರೀನಿವಾಸ್‌ ಅವರಿಗೆ ಬಂಧನದ ಭೀತಿ ಎದುರಾಗಿದೆ.

ಅಂಕಿತಾ ಅವರು ಶ್ರೀನಿವಾಸ್‌ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಶ್ರೀನಿವಾಸ್‌ ಅವರು ಲಿಂಗ ತಾರತಮ್ಯ ಮಾಡಿದ್ದಾರೆ. ಹೆಣ್ಣು ಎಂಬ ಕಾರಣಕ್ಕೆ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ. ನೀವು ಓಡ್ಕಾ ಕುಡಿಯುತ್ತೀರಾ ಎಂದು ವ್ಯಂಗ್ಯವಾಗಿ ಪ್ರಶ್ನೆಗಳನ್ನು ಕೇಳಿದ್ದಾರೆ ಅಂತ ಅಂಕಿತಾ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಗುವಾಹಟಿ ಐಪಿಎಸ್‌ ಅಧಿಕಾರಿ ಪ್ರತೀಕ್‌ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಶ್ರೀನಿವಾಸ್‌ ನಿವಾಸಕ್ಕೆ ಪೊಲೀರು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.

ಆದ್ರೆ ಕಾಂಗ್ರೆಸ್‌ ಮಾತ್ರ ಬೇರೆಯದನ್ನೇ ಹೇಳುತ್ತಿದೆ. ಅಂಕಿತಾ ಅವರು ವಿನಾಕಾರಣ ಶ್ರೀನಿವಾಸ್‌ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಲಾಗಿದೆ.

 

Share Post