ನಾವು ಕಾವಿ ಹಾಕ್ಕೊಂಡಿಲ್ಲ, ಖಾದಿ ಹಾಕ್ಕೊಂಡಿದೀನಿ; ಡಿ.ಕೆ.ಶಿವಕುಮಾರ್
ಕೊಲ್ಲೂರು; ನಾನು ಕಾವಿ ಹಾಕ್ಕೊಂಡಿಲ್ಲ, ಖಾದಿ ಹಾಕ್ಕೊಂಡಿದೀನಿ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ನಾನೂ ಸಿಎಂ ರೇಸ್ನಲ್ಲಿದ್ದೇನೆ ಎಂಬುದನ್ನು ಹೇಳಿದ್ದಾರೆ. ಕೊಲ್ಲೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಮುಂದಿನ ಸಿಎಂ ಬಗ್ಗೆ ಪ್ರಶ್ನೆ ಮಾಡಿದಾಗಿ ಈ ರೀತಿಯ ಉತ್ತರ ನೀಡಿದ್ದಾರೆ.
ಇನ್ನು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ಡಿ.ಕೆ.ಶಿವಕುಮಾರ್, ಕರ್ನಾಟಕದಲ್ಲಿ ಅತಿ ಭ್ರಷ್ಟ ಸರ್ಕಾರ ಇತ್ತು. ಅದೇ ಪಕ್ಷದ ಹಲವು ನಾಯಕರು ತಮ್ಮ ಪಕ್ಷದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ನಲವತ್ತು ಪರ್ಸೆಂಟ್ ಕಮೀಷನ್ ಪಡೆಯುತ್ತಿದ್ದ ಈ ಸರ್ಕಾರವನ್ನು ಕಿತ್ತೊಯಬೇಕು ಎಂದು ಹೇಳಿದರು. ಭ್ರಷ್ಟಾಚಾರ ನಿರ್ಮೂಲನೆ ಮಾಡುವುದೇ ನಮ್ಮ ಗುರಿ, ನಮ್ಮ ಸರ್ಕಾರಕ್ಕೆ ಅಸ್ತಿತ್ವಕ್ಕೆ ಬಂದ ಮೇಲೆ ಪಾರದರ್ಶಕ ಆಡಳಿತ ನೀಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.