BengaluruNational

ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ತಡೆ; ಮೇ 9ಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ; ಮುಸ್ಲಿಮರಿಗೆ 2ಬಿ ಅಡಿ ಶೇ.4ರಷ್ಟು ಮೀಸಲಾತಿ ನೀಡಲಾಗಿತ್ತು. ಆದ್ರೆ ಅದನ್ನು ರಾಜ್ಯ ಬಿಜೆಪಿ ಸರ್ಕಾರ ರದ್ದು ಮಾಡಿದೆ. ಇದಕ್ಕೆ ಈಗ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಮೇ ೯ರವರೆಗೂ ರದ್ದು ಆದೇಶವನ್ನು ಜಾರಿ ಮಾಡದಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಹಲವರು ಮೇಲ್ಮನವಿ ಅರ್ಜಿಗಳನ್ನು ಸಲ್ಲಿಕೆ ಮಾಡಿದ್ದರು. ಇವುಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ದ್ವಿಸದಸ್ಯಪೀಠ, ವಿಚಾರಣೆಯನ್ನು ಮೇ ೯ಕ್ಕೆ ಮುಂದೂಡಿದೆ. ಜೊತೆಗೆ ಅಲ್ಲಿಯವರೆಗೂ ಮೀಸಲಾತಿ ರದ್ದು ಮಾಡಿರುವುದಕ್ಕೆ ತಡೆಯಾಜ್ಞೆ ನೀಡಿದೆ.

Share Post