National

ತಮಿಳುನಾಡಿನಲ್ಲಿ ಭಾರಿ ಮಳೆ; ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌..!

ಚೆನ್ನೈ: ತಮಿಳುನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಒಂಬತ್ತು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಡಿಸೆಂಬರ್‌ 15ರವರೆಗೂ ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ನಾಗಪಟ್ಟಣಂ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.  ಇದಲ್ಲದೆ 22 ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ನವೆಂಬರ್ 30ರವರೆಗೆ ತಮಿಳುನಾಡು, ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರ ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 15ರವರೆಗೂ ತಮಿಳುನಾಡಿನಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Share Post