CrimeSports

ಕುಸ್ತಿಪಟುಗಳಿಗೆ ಭದ್ರತೆ ಒದಗಿಸಿದ ದೆಹಲಿ ಪೊಲೀಸರು

ನವದೆಹಲಿ; ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳಾ ಕುಸ್ತಿಪಟುಗಳಿಗೆ ದೆಹಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಇಂದು ಮಹಿಳಾ ಕುಸ್ತಿಪಟುಗಳಿಗೆ ದೆಹಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ ಎಂದು ಕುಸ್ತಿಪಟುಗಳ ಪರ ವಕೀಲ ನರೇಂದ್ರ ಹೂಡಾ ತಿಳಿಸಿದ್ದಾರೆ.

ತಮ್ಮ ಜೀವಕ್ಕೆ ಅಪಾಯವಿದೆ ಎಂದು ಕುಸ್ತಿಪಟುಗಳು ಆತಂಕ ವ್ಯಕ್ತಪಡಿಸಿದ್ದರು. ಹೀಗಾಗಿ ಭದ್ರತೆ ಒದಗಿಸುವಂತೆ ಎರಡು ದಿನಗಳ ಹಿಂದೆ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಸುಪ್ರೀಂ ಕೋರ್ಟ್‌ನ ಆದೇಶದಂತೆ ದೆಹಲಿ ಪೊಲೀಸರು ಇಂದು ಭದ್ರತೆ ಒದಗಿಸಿದ್ದಾರೆ ಎಂದು ಹೂಡಾ ಹೇಳಿದ್ದಾರೆ.

WFI ಮುಖ್ಯಸ್ಥರ ವಿರುದ್ಧ ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ದೂರುಗಳ ಮೇಲೆ ದೆಹಲಿ ಪೊಲೀಸರು ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಇದೀಗ ಎಫ್‌ಐಆರ್‌ಗಳು ದಾಖಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಹೂಡಾ ಹೇಳಿದ್ದಾರೆ.

Share Post