BengaluruPolitics

ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಬಡ ಜನರಿಗೆ ಬಂಪರ್‌

ಬೆಂಗಳೂರು; ಕಾಂಗ್ರೆಸ್‌ ತನ್ನ ಚುನಾವಣಾ ಪ್ರಣಾಳಿಕೆ ಪ್ರಕಟ ಮಾಡಿದೆ. ಈಗಾಗಲೇ ಘೊಷಿಸಿರುವ ಐದು ಉಚಿತ ಭರವಸೆಗಳ ಜೊತೆಗೆ ಇನ್ನೂ ಹತ್ತು ಹಲವು ಭರವಸೆಗಳನ್ನು ನೀಡಲಾಗಿದೆ. ಅವುಗಳು ಈ ಕೆಳಗಿನಂತಿವೆ.

ಪ್ರಣಾಳಿಕೆಯಲ್ಲಿರುವ ಅಂಶಗಳು

  • ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​
  • ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ
  • ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.
  • ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು
  • ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ.
  • ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
  • ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ
  • ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ
  • ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ
  • ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ
  • ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ
  • ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ
  • ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ
  • ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ
  • ನೀರಾವರಿಗಾಗಿ ಮುಂದಿನ 5 ವರ್ಷಗಳಲ್ಲಿ 1.50ಲಕ್ಷ ಕೋಟಿ ರೂ.
  • ಕನಕಪುರದಲ್ಲಿ ಅತ್ಯಾಧುನಿಕ ವಿಶ್ವ ದರ್ಜೆಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
  • ಬಿಬಿಎಂಪಿ ನಿರ್ವಹಣೆಗಾಗಿಯೇ ಸಮಗ್ರ ಶಾಸನ ಜಾರಿ
  • ಒಂದೇ ವೇದಿಕೆ ಅಡಿ ಸಾರಿಗೆ ವಿದ್ಯುತ್ ವಸತಿ ಒಳಚರಂಡಿ, ನೀರು ಸರಬರಾಜು ಸೌಕರ್ಯ
  • ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ರಾತ್ರಿ 1 ಗಂಟೆ ತನಕ ಬಸ್ ವ್ಯವಸ್ಥೆ
  • NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ
  • ಸರ್ಕಾರದಿಂದಲೇ ಮನೆಗಳ ನಿರ್ಮಾಣ
  • ಮಂಗಳಮುಖಿರಿಗಾಗಿ ಮಂಡಳಿ ಸ್ಥಾಪನೆ, 100 ಕೋಟಿ ಅನುದಾನ
  • ಆಟೋ ಚಾಲಕರ ಮಂಡಳಿ ಹಾಗೂ ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪನೆ
  • ಪತ್ರಕರ್ತರ ಕಲ್ಯಾಣ ನಿಧಿಗೆ 500 ಕೋಟಿ ರೂ ಮೀಸಲು
  • SC-ST ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ದ.
  • ಒಂದು ಬಾರಿಯ ನೆರವಿನ ರೂಪದಲ್ಲಿ ಬೀದಿ ವ್ಯಾಪಾರಿಗಳಿಗೆ 20 ಸಾವಿರ ಅನುದಾನ
  • ಹಿರಿಯ ನಾಗರಿಕರಿಗೆ ಎರಡು ವರ್ಷಕ್ಕೊಮ್ಮೆ ರಾಜ್ಯದ 15 ದೇಶದ 10 ಪವಿತ್ರ ಸ್ಥಳಗಳಿಗೆ ಉಚಿತ ಪ್ರವಾಸ.
  • ಕಾಶಿ, ಮಥುರ, ಕೈಲಾಸ, ಮಾನಸ ಸರೋವರ ಯಾತ್ರೆಯ ಸಬ್ಸಿಡಿ ಹೆಚ್ಚಳ
  • ವಿಶೇಷ ಚೇತನರಿಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಶಾಲೆ ಸ್ಥಾಪನೆ.
  • ಅಂಗವಿಕಲ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ.
  • ಎಸ್.ಸಿ ಎಸ್.ಟಿ ಮೀಸಲಾತಿ ಸೇರಿದಂತೆ ಶೇ.50 ರಿಂದ ಶೇ.75ಕ್ಕೆ ಏರಿಕೆಗೆ ಸೂಕ್ತ ಕ್ರಮ
Share Post