BengaluruPolitics

Damage Control Meeting; ಕಾಂಗ್ರೆಸ್‌ಗೆ ಭಜರಂಗದಳದ ತಲೆನೋವು; ಡ್ಯಾಮೇಜ್‌ ಕಂಟ್ರೋಲ್‌ಗೆ ಸೀಕ್ರೇಟ್‌ ಮೀಟಿಂಗ್‌

ಬೆಂಗಳೂರು; ಕಾಂಗ್ರೆಸ್‌ಗೆ ಪ್ರಣಾಳಿಕೆ ತೆಲನೋವು ಜಾಸ್ತಿಯಾಗಿದೆ. ಭಜರಂಗ ದಳ ನಿಷೇಧಿಸುವ ವಿಚಾರವನ್ನು ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವುದಕ್ಕೆ ಬಿಜೆಪಿ ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದೆ. ಅದಕ್ಕಾಗಿ ಇಂದು ಕಾಂಗ್ರೆಸ್‌ ನಾಯಕರು ಸೀಕ್ರೇಟ್‌ ಸಭೆ ನಡೆಸುತ್ತಿದ್ದಾರೆ. ಬೆಂಗಳೂರಿನ ಶಾಂಘ್ರಿಲಾ ಹೋಟೆಲ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ಸೇರಿದಂತೆ ಹಲವು ನಾಯಕರು ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಸಮಾಜದ ಶಾಂತಿ ಕದಡುವ ಸಂಘಟನೆಗಳನ್ನು ಬ್ಯಾನ್‌ ಮಾಡೋದಾಗಿ ನಿನ್ನೆ ಬಿಡುಗಡೆಯಾದ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಅದರಲ್ಲಿ ಉದಾಹರಣೆಯಾಗಿ ಪಿಎಫ್‌ಐ, ಬಜರಂಗದಳಗಳನ್ನು ಹೆಸರಿಸಲಾಗಿತ್ತು. ಹೀಗಾಗಿ ಬಿಜೆಪಿಯವರನ್ನು ಇದನ್ನೇ ಅಸ್ತ್ರ ಮಾಡಿಕೊಂಡು ಕಾಂಗ್ರೆಸ್‌ಗೆ ಠಕ್ಕರ್‌ ಕೊಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ಗೆ ಕೊಂಚ ಡ್ಯಾಮೇಜ್‌ ಆಗಿದೆ. ಕಾಂಗ್ರೆಸ್‌ ನವರು ಈ ಬಗ್ಗೆರ ಸಮಜಾಯಿಷಿ ಕೊಟ್ಟರೂ, ಬಿಜೆಪಿ ಇದನ್ನು ಭಾವನಾತ್ಮಕವಾಗಿ ಬಳಸಿಕೊಳ್ಳುತ್ತಿದೆ. ಹೀಗಾಗಿ, ಈ ಡ್ಯಾಮೇಜ್‌ನ್ನು ಕಂಟ್ರೋಲ್‌ ಮಾಡೋದು ಹೇಗೆ ಅನ್ನೋದರ ಬಗ್ಗೆ ನಾಯಕರು ಹೋಟೆಲ್‌ನಲ್ಲಿ ಚರ್ಚೆ ನಡೆಸುತ್ತಿದ್ದಾರೆ.

ಪ್ರಣಾಳಿಕೆಯಲ್ಲಿನ ಈ ವಿಚಾರವನ್ನು ತೆಗೆಯಬೇಕೆ ಅಥವಾ ಇದನ್ನು ಹೇಗೆ ಸಮರ್ಥಿಸಿಕೊಳ್ಳುವುದು..? ಎಂಬುದರ ಬಗ್ಗೆ ಕಾಂಗ್ರೆಸ್‌ ನಾಯಕರು ಚರ್ಚೆ ನಡೆಸುತ್ತಿದ್ದಾರೆ.

Share Post