BengaluruCrimePolitics

Video; ಕಾಂಗ್ರೆಸ್‌ ಅಭ್ಯರ್ಥಿ ಕಸುಮಾರನ್ನು ನೂಕಾಡಿದ ಪುರುಷ ಪೊಲೀಸ್‌

ಬೆಂಗಳೂರು; ರಾಜರಾಜೇಶ್ವರಿ ನಗರದಲ್ಲಿ ಚುನಾವಣಾ ಬಿಸಿ ತುಂಬಾನೇ ಜೋರಾಗಿದೆ. ಈ ಬಾರಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಈ ನಡುವೆ ಎರಡೂ ಕಡೆಯವರ ನಡುವೆ ಜಗಳಗಳೂ ನಡೆಯುತ್ತಿದ್ದು, ಈ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರನ್ನು ಪುರುಷ ಪೊಲೀಸ್‌ ಅಧಿಕಾರಿಯೊಬ್ಬರು ತಳ್ಳಿದ್ದಾರೆಂಬ ಆರೋಪ ಕೇಳಿಬಂದಿದೆ.

ರಾಜರಾಜೇಶ್ವರ ನಗರ ಕ್ಷೇತ್ರದಲ್ಲಿ ಯಾವುದೋ ವಿಷಯಕ್ಕೆ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಜಗಳ ನಡೆದಿದೆ. ಇದನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಸುಮ್ಮನೆ ನಿಂತಿದ್ದ ಕುಸುಮಾ ಹನುಮಂತರಾಯಪ್ಪ ಅವರನ್ನು ಪೊಲೀಸ್‌ ಅಧಿಕಾರಿಯೊಬ್ಬರು ಜೋರಾಗಿ ತಳ್ಳಿದ್ದಾರೆ. ಆ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಸಿಪಿಯವರೇ ಕುಸುಮಾ ಅವರನ್ನು ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಾದ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಯಶವಂತಪುರ ಪೊಲೀಸ್‌ ಠಾಣೆ ಬಳಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

Share Post