BengaluruPolitics

ಕಾಂಗ್ರೆಸ್‌ ವಿನೂತನ ಪ್ರಚಾರ; ಬೆಂಗಳೂರಿನ 500 ಸ್ಥಳ, 1 ಲಕ್ಷ ಕಾರ್ಯಕರ್ತರು

ಬೆಂಗಳೂರು; ಇಂದು ಕಾಂಗ್ರೆಸ್‌ನಿಂದ ವಿನೂತನ ಪ್ರಚಾರ ನಡೆಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರು ಕಾಂಗ್ರೆಸ್‌ನ ಗ್ಯಾರೆಂಟಿ ಕಾರ್ಡ್‌ಗಳನ್ನು ಹಿಡಿದುಕೊಂಡು ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಪ್ರಚಾರ ನಡೆಸಿದ್ದಾರೆ. ಬೆಂಗಳೂರಿನ ಸುಮಾರು 500 ಸ್ಥಳಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ.

ಕಾಂಗ್ರೆಸ್‌ ಐದು ಗ್ಯಾರೆಂಟಿಗಳನ್ನು ನೀಡಿದೆ. ಆ ಗ್ಯಾರೆಂಟಿಗಳಿರುವ ಪೋಸ್ಟರ್‌ಗಳನ್ನು ಹಿಡಿದಿರುವ ಅಸಂಘಟಿತ ಕಾರ್ಮಿಕರು ಕಾಂಗ್ರೆಸ್‌ಗೆ ಮತ ಹಾಕುವಂತೆ ಮನವಿ ಮಾಡುತ್ತಿದ್ದಾರೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಶ್ರಮಜೀವಿಗಳು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಇಂದು ಬಹಿರಂಗ ಪ್ರಚಾರ ಅಂತ್ಯವಾಗುವುದರಿಂದ ಕಾಂಗ್ರೆಸ್‌ ಈ ರೀತಿಯ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ.

Share Post