DistrictsPolitics

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬರಲಿದೆ; ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಯಲ್ಲಿ ಮತದಾನ ಮಾಡಿದ್ದಾರೆ. ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದರು.

ಈ ಬಾರಿ ಕಾಂಗ್ರೆಸ್‌ ಪಕ್ಷಕ್ಕೆ ಸುಮಾರು 130-135 ಸೀಟುಗಳು ಬರಲಿವೆ. ಸ್ಪಷ್ಟ ಬಹುಮತದೊಂದಿಗೆ ನಾನು ಅಧಿಕಾರ ಹಿಡಿಯುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

 

Share Post