BengaluruPolitics

ಮತಗಟ್ಟೆಯ ಬಳಿಯೇ ಇಬ್ಬರು ವ್ಯಕ್ತಿಗಳು ಸಾವು

ಬೆಂಗಳೂರು; ಮತದಾನ ಮಾಡಲು ಬಂದಿದ್ದ ಮತದಾರರಿಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಯರಜರ್ನಿ ಗ್ರಾಮದಲ್ಲಿ ಮಹಿಳೆಯೊಬ್ಬರು ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಲು ಬಂದಿದ್ದರು. ಈ ವೇಳೆ ಮತದಾನ ಮಾಡುವುದಕ್ಕೂ ಮೊದಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಇನ್ನು ಹಾಸನ ಜಿಲ್ಲೆಯಲ್ಲೂ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಬೇಲೂರು ತಾಲ್ಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಯಣ್ಣ ಎಂಬುವವರು ಗ್ರಾಮದಲ್ಲಿ ಮತ ಚಲಾಯಿಸಿದ್ದಾರೆ. ನಂತ ಅವರು ಹೊರಬರುತ್ತಿದ್ದಂತೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

Share Post