ನನ್ನ ಸಹೋದರ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು; ಡಿ.ಕೆ.ಸುರೇಶ್
ಬೆಂಗಳೂರು; ನನ್ನ ಸಹೋದರ ಡಿ.ಕೆ.ಶಿವಕುಮಾರ್ ಅವರು ಪಕ್ಷವನ್ನು ಸಂಘಟನೆ ಮಾಡಿ, ಪಕ್ಷವನ್ನು ಗೆಲ್ಲಿಸಿದ್ದಾರೆ. ಹೀಗಾಗಿ ಅವರು ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಆಸೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ.
ನಾನು ಸಂಸದನಾಗಿ ಹೇಳುತ್ತಿಲ್ಲ. ತಮ್ಮನಾಗಿ ಹೇಳ್ತಾ ಇದ್ದೇನೆ. ನಮ್ಮ ಅಣ್ಣ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಅದೇ ನನ್ನ ಆಸೆ. ಡಿ.ಕೆ.ಶಿವಕುಮಾರ್ ಸಿಎಂ ಆದರೆ ಅತ್ಯಂತ ಖುಷಿಪಡುವವನು ನಾನು ಎಂದು ಡಿ.ಕೆ.ಸುರೇಶ್ ಹೇಳಿದ್ದಾರೆ.