ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು; ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಸಭೆಗೆ ಎಲ್ಲಾ ಕಾಂಗ್ರೆಸ್ ಶಾಸಕರೂ ಆಗಮಿಸುತ್ತಿದ್ದಾರೆ. ಹೋಟೆಲ್ನಲ್ಲಿ 150 ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.
ಈಗಾಗಲೇ ಸಿದ್ದರಾಮಯ್ಯ ಅವರು ಹೋಟೆಲ್ಗೆ ಆಗಮಿಸಿದ್ದಾರೆ. ಈ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರಿಂದ ಯಾರು ಶಾಸಕಾಂಗ ಪಕ್ಷದ ನಾಯಕನಾಗಬೇಕು ಎಂಬುದರ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಈ ವೇಳೆ ಕಾಂಗ್ರೆಸ್ ಹೈಕಮಾಂಡ್ ಕಳುಹಿಸಿದ ಮೂವರು ವೀಕ್ಷಕರು ಕೂಡಾ ಇರಲಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಏನು ತೀರ್ಮಾನ ಆಗುತ್ತೋ ಅದನ್ನು ವೀಕ್ಷಕರು ಹೈಕಮಾಂಡ್ಗೆ ಮಾಹಿತಿ ನೀಡಲಿದ್ದಾರೆ. ಅನಂತರ ಕಾಂಗ್ರೆಸ್ ಹೈಕಮಾಂಡ್, ಯಾರು ಸಿಎಂ ಆಗಬೇಕು ಎಂಬುದನ್ನು ನಿರ್ಧಾರ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.