BengaluruPolitics

ಕಾಂಗ್ರೆಸ್‌ ಪಕ್ಷ ನನಗೆ ದೇವಸ್ಥಾನವಿದ್ದಂತೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಕಾಂಗ್ರೆಸ್‌ ಪಕ್ಷವೇ ನನಗೆ ಶಕ್ತಿ. ಕಾಂಗ್ರೆಸ್‌ ನನಗೆ ದೇವಸ್ಥಾನವಿದ್ದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ದೆಹಲಿಗೆ ಹೊರಡುವ ಮೊದಲು ಮಾತನಾಡಿದ ಡಿ.ಕೆ.ಶಿವಕುಮಾರ್‌, ರಾಜ್ಯದ ಜನರ ನಂಬಿಕೆ ಉಳಿಸಿಕೊಳ್ಳಲು ಶ್ರಮ ಪಡೆಬೇಕಿದೆ. ಜನರ ಆಶಿರ್ವಾದ ನನ್ನ ಮೇಲೆ ಇರಲಿ ಎಂದು ಹೇಳಿದ್ದಾರೆ.

ಎಐಸಿಸಿ ಪ್ರಧಾನಕಾರ್ಯದರ್ಶಿ ನನಗೆ ಸೂಚನೆ ನೀಡಿದ್ದಾರೆ. ಒಬ್ಬನೇ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ನಾನೊಬ್ಬನೇ ದೆಹಲಿಗೆ ಹೋಗುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Share Post