NationalPolitics

ರಾಹುಲ್‌ ಗಾಂಧಿ- ಮಲ್ಲಿಕಾರ್ಜುನ ಖರ್ಗೆ ಸಭೆ ಅಂತ್ಯ

ದೆಹಲಿ; ದೆಹಲಿಯ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಸಭೆ ಅಂತ್ಯವಾಗಿದೆ. ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆದಿದೆ. ಈ ಸಭೆಯಲ್ಲಿ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆದಿವೆ. ಇಬ್ಬರನ್ನೂ ಹೇಗೆ ಸಂಧಾನ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಇನ್ನು ಸ್ವಲ್ಪ ಹೊತ್ತಿನಲ್ಲಿ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರು ಖರ್ಗೆ ನಿವಾಸಕ್ಕೆ ಆಗಮಿಸಲಿದ್ದಾರೆ. ಖರ್ಗೆ ಜೊತೆ ಇಬ್ಬರೂ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share Post