24 ಗಂಟೆಯೊಳಗೆ ತೀರ್ಮಾನವಾಗುತ್ತೆ; ಸಲೀಂ ಅಹ್ಮದ್
ದೆಹಲಿ; ಇನ್ನು 24 ಗಂಟೆಗಳಲ್ಲಿ ಸಿಎಂ ಆಯ್ಕೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.
ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ ಸೇರಿದಂತೆ ಹಲವು ನಾಯಕರು ಸಾಧ್ಯಾಸಾಧ್ಯತೆಗಳ ಬಗ್ಗೆ ಮಾತುಕತೆ ನಡೆದಿದೆ. ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆದಿದೆ. ಈಗ ಖರ್ಗೆಯವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಜೊತೆ ಮಾತನಾಡಲಿದ್ದಾರೆ. 24 ಗಂಟೆಯೊಳಗೆ ತೀರ್ಮಾನ ಆಗಲಿದೆ ಎಂಬ ವಿಶ್ವಾಸವಿದೆ ಎಂದು ಸಲೀಂ ಅಹ್ಮದ್ ಹೇಳಿದ್ದಾರೆ.