ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ; ಶೀಘ್ರದಲ್ಲೇ ಸಿಎಂ ಯಾರು ಅಂತ ಘೋಷಣೆ
ನವದೆಹಲಿ; ಸಿದ್ದರಾಮಯ್ಯ ಅವರಿಗೆ ಸಿಎಂ ಪಟ್ಟ ಕಟ್ಟೋದಕ್ಕೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ಸಿದ್ದರಾಮಯ್ಯ ಅವರು 10 ಜನಪಥ್‌ನಲ್ಲಿರುವ ಸೋನಿಯಾಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸೋನಿಯಾಗಾಂಧಿ ನಿವಾಸಲ್ಲಿ ರಾಹುಲ್ ಗಾಂಧಿ ಇದ್ದು ರಾಹುಲ್ ಗಾಂಧಿ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದಾರೆ.
ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಅವರನ್ನು ಸಿಎಂ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಡಿಸಿಎಂ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ನಾಳೆಯೇ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗುತ್ತಿದೆ.