National

ಕಿಸಾನ್‌ ಮೋರ್ಚಾ ಟ್ರ್ಯಾಕ್ಟರ್‌ ಮೆರವಣಿಗೆ ರದ್ದು

ನವದೆಹಲಿ: ಸೋಮವಾರ ಸಂಸತ್ತಿನವರೆಗೂ ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್ ರ‍್ಯಾಲಿಯನ್ನು ಸಂಯುಕ್ತ ಕಿಸಾನ್‌ ಮೋರ್ಚಾ ರದ್ದುಪಡಿಸಿದೆ.  ರೈತ ಮುಖಂಡ ದರ್ಶನ್‌ ಪಾಲ್ ಸಿಂಗ್ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದೆ. ಅದೇ ದಿನ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲು ರೈತ ಸಂಘಟನೆಗಳ ಒಕ್ಕೂಟ ಕರೆ ನೀಡಿತ್ತು. ಆದರೆ ತನ್ನ ನಿರ್ಧಾರದಿಂದ ವಾಪಸ್‌ ಬಂದಿದೆ.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ  ಸಿಗುವಂತೆ ಕಾಯ್ದೆಯ ಬಲ ನೀಡುವ ಕುರಿತು ಕೇಂದ್ರ ಸರ್ಕಾರ ಸಂಸತ್‌ ಅಧಿವೇಶನದಲ್ಲಿಯೇ ಭರವಸೆ ನೀಡಬೇಕು ಎಂಬುದು ಸಂಯುಕ್ತ ಕಿಸಾನ್‌ ಮೋರ್ಚಾದ ಆಗ್ರಹವಾಗಿದೆ. ಈ ಬಗ್ಗೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಸಾನ್‌ ಮೋರ್ಚಾ ಮುಖಂಡರು, ನಾವು ರ‍್ಯಾಲಿ ರದ್ದುಪಡಿಸಿದ್ದೇವೆ. ಪ್ರತಿಭಟನಾನಿರತ ರೈತರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಕೈಬಿಡಬೇಕು. ಹುತಾತ್ಮ ರೈತರಿಗೆ ಸ್ಮಾರಕ ನಿರ್ಮಿಸಲು ಭೂಮಿ ಮಂಜೂರು ಮಾಡಬೇಕು ಹಾಗೂ ಸಂಪುಟದಿಂದ ಸಚಿವ ಅಜಯ್‌ ಮಿಶ್ರಾ ಅವರನ್ನು ಕೈಬಿಡಬೇಕು ಎಂದು ಪ್ರಧಾನಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

Share Post