NationalPolitics

ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್‌ ಡಿಸಿಎಂ; ಅಧಿಕೃತ ಘೋಷಣೆ

ನವದೆಹಲಿ; ಸಿದ್ದರಾಮಯ್ಯ ಸಿಎಂ ಆಗಲಿದ್ದಾರೆ, ಡಿ.ಕೆ.ಶಿವಕುಮಾರ್‌ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಅಧಿಕೃತವಾಗಿ ಘೊಷಣೆ ಮಾಡಲಾಗಿದೆ. ಎಐಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ್‌ ಈ ಘೋಷಣೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು ಏಕೈಕ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೊತೆಗೆ ಲೋಕಸಭಾ ಚುನಾವಣೆ ಮುಗಿಯುವವರೆಗೂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರೆಯಲಿದ್ದಾರೆ ಎಂದು ಹೇಳಿದರು.

ಶನಿವಾರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಇದರಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಜೊತೆ ಹಲವರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಇರುವವರು ಹಾಗೂ ಸಿಎಂ ಆಯ್ಕೆ ಲೇಟಾಗಿದ್ದಕ್ಕೆ ವೇಣುಗೋಪಾಲ್‌ ಹಾಗೂ ಸುರ್ಜೇವಾಲಾ ಸ್ಪಷ್ಟನೆ ನೀಡಿದರು.

 

Share Post