ಕಂಠೀರವದಲ್ಲಿ ಸಿದ್ಧತೆ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಬೆಂಗಳೂರು; ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸಮಾರಂಭಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಹಾಗೂ ನಿಯೋಜಿಯ ಡಿಸಿಎಂ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದ ಅವರು, ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ನಾಳೆ ಮಧ್ಯಾಹ್ನ ೧೨.೩೦ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಸಿದ್ಧತೆ ನಡೆದಿದೆ. ಹೀಗಾಗಿ ಕಂಠೀರವ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ವಿವಿಐಪಿಗಳು ಪ್ರವೇಶಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
2 ಗೇಟ್ಗಳಲ್ಲಿ ವಿವಿಐಪಿ ವಾಹನಗಳ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಪೊಲೀಸ್ ಕಮಿಷನರ್, ಇಬ್ಬರು ಜಂಟಿ ಪೊಲೀಸ್ ಆಯುಕ್ತರು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು ಭದ್ರತೆಯ ನೇತೃತ್ವ ವಹಿಸಿಕೊಂಡಿದ್ದಾರೆ.
8 ಡಿಸಿಪಿಗಳು, 10 ಎಸಿಪಿಗಳು, 28 ಇನ್ಸ್ಪೆಕ್ಟರ್ಗಳು, 1,500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಸಂಚಾರ ನಿರ್ವಹಣೆಗಾಗಿ 500 ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.