BengaluruPolitics

ಪ್ರಮಾಣವಚನ ಸಮಾರಂಭ ಹಿನ್ನೆಲೆ; ಕೆಲ ಮಾರ್ಗಗಳ ಬದಲಾವಣೆ

ಬೆಂಗಳೂರು; ನಾಳೆ ನೂತನ ಸಂಪುಟದ ಪ್ರಮಾಣವಚನ ನಡೆಯುತ್ತಿದೆ. ಹೀಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಭಾರಿ ಜನಸ್ತೋಮ ಸೇರಲಿದೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್‌ ಸಮಸ್ಯೆ ಕಡಿಮೆ ಮಾಡುವುದಕ್ಕಾಗಿ ವಾಹನ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ,

ನಾಳೆ ಬೆಳಗ್ಗೆ 9.30 ರಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಹಲವು ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ  ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಲಾಗಿದೆ.

ಸ್ಟೀನ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಭಂದಿಸಲಾಗಿದೆ

ಆದ್ರೆ ಕ್ಲೀನ್ಸ್ ವೃತ್ತದಲ್ಲಿ ಎಡ ಅಥವಾ ಬಲ ತಿರುವು ಪಡೆದು ಲ್ಯಾವಲ್ಲೆ ರಸ್ತೆ ಅಥವಾ ಕ್ಲೀನ್ಸ್ ರಸ್ತೆಯ ಮೂಲಕ ವಾಹನಗಳು ಸಂಚಾರ ಮಾಡಬಹುದು.

ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದಿಂದ ಬರುವ ವಾಹನಗಳನ್ನು ಪಟ್ಟಾ ಜಂಕ್ಷನ್‌ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ಡೈವರ್ಷನ್ ಮಾಡಲಾಗುತ್ತದೆ.

ಹೀಗಾಗಿ ಬಿಎಂಟಿಸಿ ಹಾಗೂ ಇತರೆ ವಾಹನಗಳು ಪೊಲೀಸ್ ತಿಮ್ಮಯ್ಯ ವೃತ್ತದಲ್ಲಿ ಎಡ ತಿರುವು ಪಡೆದು ಕೆ.ಆರ್.ಸರ್ಕಲ್ ಮುಖಾಂತರ ಸಂಚಾರ ಮಾಡಬಹುದು.

ಸಿಟಿಓ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಕಬ್ಬನ್ ರಸ್ತೆಯ ಮುಖೇನ ಅನಿಲ್ ಕುಂಬ್ಳೆ ವೃತ್ತದ ಕಡೆಗೆ ಅಥವಾ ಮಣಿಪಾಲ್ ಸೆಂಟರ್‌ ಕಡೆಗೆ ಸಂಚಾರ ಮಾಡಬಹುದು.

ಹಲಸೂರು ಗೇಟ್ ಕಡೆಯಿಂದ ಸಿದ್ದಲಿಂಗಯ್ಯ ಸರ್ಕಲ್ ಕಡೆಗೆ ಹೋಗುವ ವಾಹನಗಳನ್ನು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯ ವ್ಯಕ್ತಿಗಳ ವಾಹನಗಳನ್ನು ಸೆಂಟ್ ಜೋಸೆಫ್ ಕಾಲೇಜ್ ಮೈದಾನದಲ್ಲಿ ನಿಲ್ಲಿಸಲು ಸೂಚನೆ ನೀಡಲಾಗಿದೆ.

ಇತರೆ ವಾಹನಗಳನ್ನು ಬಿಬಿಎಂಪಿ ಮುಖ್ಯ ಕಚೇರಿ ಆವರಣ, ಬದಾಮಿ ಹೌಸ್, ಕೆ.ಜಿ. ರಸ್ತೆಯ ಎಡ ಬದಿಯಲ್ಲಿ ಹಾಗು ಯುನೈಟೆಡ್ ಮಿಷನ್ ಕಾಲೇಜ್ ಮೈದಾನದಲ್ಲಿ ನಿಲ್ಲಿಸಬಹುದು.

ಆರ್.ಆರ್.ಎಂ.ಆರ್ ರಸ್ತೆ ಹಾಗು ಕಸ್ತೂರ್ಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವ ಆಹ್ವಾನಿತರು ತಮ್ಮ ತಮ್ಮ ವಾಹನಗಳಿಂದ ಇಳಿದು ಕೆ.ಬಿ. ರಸ್ತೆ,ಆರ್.ಆರ್.ಎಂ.ಆರ್ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯ ಗೇಟ್‌ಗಳ ಮೂಲಕ ನಡೆದು ಒಳಗೆ ಪ್ರವೇಶಿಸಬೇಕಾಗುತ್ತದೆ

 

Share Post