BengaluruPolitics

ಕಂಠೀರವ ಕ್ರೀಡಾಂಗಣದಲ್ಲಿ ನೂಕುನುಗ್ಗಲು; ಇಬ್ಬರಿಗೆ ಗಾಯ

ಬೆಂಗಳೂರು; ನೂತನ ಸರ್ಕಾರದ ಪ್ರಮಾಣವಚನ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಕಂಠೀರವ ಕ್ರೀಡಾಂಗಣಕ್ಕೆ ಜನರು ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದಾರೆ. ಒಳಗೆ ಹೋಗಲು ನೂಕುನುಗ್ಗಲು ಉಂಟಾಗಿದ್ದು, ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಬೆಳಗ್ಗೆಯೇ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಜನರು ಆಗಮಿಸಿದ್ದರು. ಹೀಗಾಗಿ ಒಳಗೆ ಹೋಗಲು ಸ್ಟೇಡಿಯಂನ ಪ್ರವೇಶ ದ್ವಾರವನ್ನು ತೆಗೆಯಲಾಯಿತು. ಈ ವೇಳೆ ಜನರು ಒಮ್ಮೆಲೆ ಒಳಗೆ ನುಗ್ಗಿದ್ದಾರೆ. ಇದರಿಂದಾಗಿ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಕಷ್ಟವಾಗಿದೆ. ಇದೇ ವೇಳೆ ತಳ್ಳಾಟದಿಂದಾಗಿ ಒಬ್ಬರು ಅಸ್ವಸ್ಥರಾಗಿ ಕೆಳಗೆ ಬಿದ್ದಿದ್ದಾರೆ. ಇದೇ ವೇಳೆ ಪೊಲೀಸ್‌ ಪೇದೆಯೊಬ್ಬರಿಗೂ ಗಾಯವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಗಿದೆ.

ಇನ್ನು ಸ್ಟೇಡಿಯಂ ಹೊರಭಾಗದಲ್ಲೂ ಸಾವಿರಾರು ಸಂಖ್ಯೆಯಲ್ಲಿ ಜನ ನೆರೆದಿದ್ದಾರೆ. ಎಲ್ಲೆಡೆ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಸಿದ್ದರಾಮಯ್ಯ ಅಭಿಮಾನಿಗಳು ಜೈಕಾರಗಳನ್ನು ಕೂಗುತ್ತಿದ್ದಾರೆ.

Share Post