BengaluruPolitics

ಹಂತಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ; ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು; ಶಾಲಾ ಪಠ್ಯದಲ್ಲಿ ಹಂತ ಹಂತವಾಗಿ ಪರಿಷ್ಕರಣೆ ಮಾಡಲಾಗುವುದು ಎಂದು ಶಿಕ್ಷಣ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಪಠ್ಯ ಪುಸ್ತಕ ಪರಿಷ್ಕರಣೆ ಮಾಡೋದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಪರಿಷ್ಕರಣೆ ಮಾಡುತ್ತೇವೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಈ ಬಗ್ಗೆ ಈಗಾಗಲೇ ಚರ್ಚೆ ಮಾಡಿದ್ದೇವೆ. ಅವರು ನನಗೆ ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ ಎಂದೂ ಮಧು ಬಂಗಾರಪ್ಪ ಹೇಳಿದ್ದಾರೆ. ಇನ್ನು ಹಿಜಾಬ್‌ ವಿಚಾರದಲ್ಲಿ ಕಾನೂನು ತೊಡಕುಗಳಿವೆ. ಹೀಗಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ಈ ಬಾರಿ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುತ್ತೇವೆ ಎಂದೂ ಅವರು ಹೇಳಿದ್ದಾರೆ.

Share Post