ಆರನೇ ಗ್ಯಾರೆಂಟಿಯೂ ಜಾರಿ ಮಾಡುತ್ತೇವೆಂದ ಪ್ರಿಯಾಂಕ್ ಖರ್ಗೆ; ಯಾವುದದು ಗ್ಯಾರೆಂಟಿ..?
ಕಲಬುರಗಿ; ನಮ್ಮ ಪಕ್ಷದಿಂದ ಐದು ಗ್ಯಾರೆಂಟಿಗಳನ್ನು ನೀಡಲಾಗಿತ್ತು. ನಾನು ಆರನೇ ಗ್ಯಾರೆಂಟಿಯನ್ನು ನೀಡಿದ್ದೆ. ಆ ಆರನೇ ಗ್ಯಾರೆಂಟಿಯನ್ನೂ ಜಾರಿ ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಫೇಸ್ಬುಕ್ ಪೋಸ್ಟ್ ಮಾಡಿರುವ ಅವರು, ಆರನೇ ಗ್ಯಾರೆಂಟಿ ಬಗ್ಗೆ ವಿವರ ಹಂಚಿಕೊಂಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಭ್ರಷ್ಟಾಚಾರಗಳು ನಡೆದಿದ್ದವು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಯಾರೆಲ್ಲಾ ಭ್ರಷ್ಟಾಚಾರದಲ್ಲಿ ತಡೊಗಿದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಲಾವುದು ಎಂದು ನಾನು ಆರನೇ ಗ್ಯಾರೆಂಟಿ ನೀಡಿದ್ದೆ. ಅದರಂತೆ ನಾವು ನಡೆದುಕೊಳ್ಳುತ್ತೇವೆ. ಬಿಜೆಪಿ ಸರ್ಕಾರದ ವೇಳೆ ಯಾರೆಲ್ಲಾ ಭ್ರಷ್ಟಾಚಾರ ಮಾಡಿದ್ದರೋ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಸಂವಿಧಾನದ ಅಡಿಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.