Bengaluru

ಬೆಂಗಳೂರಿನಲ್ಲಿ ಮಳೆಯ ಅಬ್ಬರ; ರಸ್ತೆಗಳೆಲ್ಲಾ ಕಾಲುವೆಗಳಾದವು..!

ಬೆಂಗಳೂರು; ಬೆಂಗಳೂರಿನ ಮೆಜೆಸ್ಟಿಕ್‌ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಮೆಜೆಸ್ಟಿಕ್‌, ಶೇಷಾದ್ರಿಪುರಂ, ಮಲ್ಲೇಶ್ವರ, ಶ್ರೀರಾಮಪುರ ಸೇರಿದಂತೆ ವಿವಿಧ ಭಾಗಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲದಿಂದ ಮಳೆ ಸುರಿಯುತ್ತಿದೆ. ಮಧ್ಯಾಹ್ನ 1.30ಕ್ಕೆ ಶುರುವಾದ ಮಳೆ 2 ಗಂಟೆಯಾದರೂ ಸುರಿಯುತ್ತಲೇ ಇತ್ತು.

ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳಿಗೆಲ್ಲಾ ನೀರು ನುಗ್ಗಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ತಗ್ಗು ಪ್ರದೇಶಗಳಲ್ಲಿ ನೀರು ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ಅಂಡರ್‌ ಪಾಸ್‌ಗಳಲ್ಲಿ ಹಲವಾರು ಅಡಿಗಳಷ್ಟು ನೀರು ನಿಂತಿದೆ.

Share Post