ಗೆಳತಿಯನ್ನು ಕೊಂದು ಪೀಸ್ ಪೀಸ್; ಕಾರಣ ಏನು ಗೊತ್ತಾ..?
ಮುಂಬೈ; ಮೂರು ವರ್ಷಗಳಿಂದ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿಯನ್ನು ಕೊಂದು ಪೀಸ್ ಪೀಸ್ ಮಾಡಿದ್ದ ಘಟನೆ ಮುಂಬೈನಲ್ಲಿ ನಡೆದಿದೆ. ಈ ಸಂಬಂಧ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮನೋಜ್ ಸುಹಾನಿ ಎಂದು ಗುರುತಿಸಲಾಗಿದೆ.
ಮುಂಬೈನ ಮೀರಾ ರೋಡ್ ಪ್ರದೇಶದ ಆಕಾಶ ಗಂಗಾ ಅಪಾರ್ಟ್‌ಮೆಂಟ್‌ನಲ್ಲಿ ಫ್ಲಾಟ್ ಬಾಡಿಗೆ ಪಡೆಯಲಾಗಿತ್ತು. ಇದರಲ್ಲಿ ಆರೋಪಿ ಮನೋಜ್ ಸುಹಾನಿ ಹಾಗೂ ಆತನ ಗೆಳತಿ ಸರಸ್ವತಿ ವೈದ್ಯ ವಾಸವಿದ್ದರು. ಇಬ್ಬರು ಲಿವಿನ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದರು. ಆದ್ರೆ ಅದೇನಾಯ್ತೋ ಏನೋ ಆರೋಫಿ ಸರಸ್ವತಿ ವೈದ್ಯಳನ್ನು ಕೊಲೆ ಮಾಡಿದ್ದಾನೆ. ನಂತರ ಆಕೆಯ ದೇಹವನ್ನು ಪೀಸ್ ಪೀಸ್ ಮಾಡಿದ್ದಾನೆ. ನಂತರ ಅದನ್ನು ಹಾಗೆಯೇ ಇಟ್ಟಿದ್ದರಿಂದ ದೇಹ ವಾಸನೆ ಬಂದಿದೆ. ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದವರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಮಹಿಳೆ ಪೀಸ್ ಪೀಸ್ ಆಗಿರುವುದು ಪತ್ತೆಯಾಗಿದೆ.
ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದಾರೆ. ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.