ಪ್ರಸಕ್ತ ವರ್ಷದಲ್ಲೇ ಪಠ್ಯ ಪುಸ್ತಕ ಪರಿಷ್ಕರಣೆಯಾಗಲಿದೆ; ಸಚಿವ ಮಧು ಬಂಗಾರಪ್ಪ
ಬೆಂಗಳೂರು; ಹಾಲಿ ವರ್ಷದಲ್ಲೇ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದ ಎರಡನೇ ಮಹಡಿಯನ್ನು ತಮ್ಮ ಕಚೇರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.
ಪಠ್ಯ ಪರಿಷ್ಕರಣೆ ಮುಂದಿನ ವರ್ಷ ಮಾಡುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದ್ರೆ ಇದು ತಪ್ಪು ಈ ವರ್ಷವೇ ಪರಿಷ್ಕರಣೆಯಾಗಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಅಂತ ಮಧು ಬಂಗಾರಪ್ಪ ಹೇಳಿದ್ದಾರೆ. ಮಕ್ಕಳು ಚಿಕ್ಕ ವಯಸ್ಸಿನಲ್ಲೇ ಸುಳ್ಳನ್ನು ಕಲಿಯಬಾರದು. ಹೀಗಾಗಿ ನಾವು ಮುಂದಿನ ವರ್ಷದವರೆಗೂ ಕಾಯುವುದಿಲ್ಲ. ತಜ್ಞರು ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಯ, ಸಿಎಂ ಸಿದ್ದರಾಮಯ್ಯ ಅವರು ಕೂಡಾ ಈ ಬಗ್ಗೆ ಹೆಚ್ಚು ಆಸಕ್ತಿ ವಹಿಸಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಕ್ಷಣದಲ್ಲೂ ಪಠ್ಯ ಪುಸ್ತಕ ಪರಿಷ್ಕರಣೆಗಾಗಿ ಸಭೆ ನಡೆಯುತ್ತಿದೆ. ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೇವೆ. ಯಾವ ಪಾಠ ಮಾಡಬೇಕು, ಯಾವುದು ಮಾಡಬಾರದು ಎಂಬುದನ್ನೂ ಶಿಕ್ಷಕರಿಗೆ ತಿಳಿಸುತ್ತೇವೆ ಎಂದು ಮಧು ಬಂಗಾರಪ್ಪ ಇದೇ ವೇಳೆ ಹೇಳಿದ್ದಾರೆ.