CrimeDistricts

ಖಾಸಗಿ ಕಂಪನಿ ಉದ್ಯೋಗಿ ನೇಣಿಗೆ ಶರಣು

ಮಡಿಕೇರಿ; ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ದೀಕ್ಷಿತಾ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಘಟನೆ ಕಾರಣ ತಿಳಿದುಬಂದಿಲ್ಲ.

21 ವರ್ಷದ ದೀಕ್ಷಿತಾ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಚೆನ್ನಾಗಿಯೇ ಇದ್ದಳು ಆದ್ರೆ ಅದ್ಯಾಕೋ ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ದೀಕ್ಷಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯವರು ವಾಪಸ್‌ ಬಂದ ಮೇಲೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಈ ಬಗ್ಗೆ ವಿರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post