BengaluruCrime

ಎಸ್‌ಬಿಐಗೆ 113 ಕೋಟಿ ಸಾಲ ಬಾಕಿ; ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ದಾಳಿ

ಬೆಂಗಳೂರು; ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ದಾಳಿ ನಡೆಸಿದ್ದಾರೆ. ಭಾರತ್ ಇನ್​ಫ್ರಾ ಎಕ್ಸ್​ಪೋರ್ಟ್ಸ್ ಅಂಡ್ ಇಂಪೋರ್ಟ್ಸ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಭಾರತ್ ಇನ್​ಫ್ರಾ ಎಕ್ಸ್​ಪೋರ್ಟ್ಸ್ ಅಂಡ್ ಇಂಪೋರ್ಟ್ಸ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 113.38 ಕೋಟಿ ರೂ ಸಾಲ ಬಾಕಿ ಉಳಿಸಿಕೊಂಡಿದೆ. ಈ ಸಾಲ ಪಡೆಯಲು ಸುಳ್ಳು ದಾಖಲೆ ಕೊಟ್ಟ ಆರೋಪ ಇದೆ.

ಇಡಿ ಅಧಿಕಾರಿಗಳ ತಂಡಗಳು ಜೂನ್ 5ರಂದು ರೇಡ್ ನಡೆಸಿರುವುದಾಗಿ ಗೊತ್ತಾಗಿದೆ. ಬೆಂಗಳೂರು ಮತ್ತು ದಾವಣಗೆರೆಯ ಭಾರತ್ ಇನ್​ಫ್ರಾ ಸಂಸ್ಥೆಯ ಕಚೇರಿಗಳ ಮೇಲೆ ನಡೆದ ದಾಳಿಗಳಲ್ಲಿ 100 ಕೋಟಿ ರೂ ಮೌಲ್ಯದ ಚಿರಾಸ್ತಿಗಳನ್ನು ಇಡಿ ಅಧಿಕಾರಿಗಳು ಜಫ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Share Post