BengaluruPolitics

ಡಿ.ಕೆ.ಶಿವಕುಮಾರ್‌ ನಾನ್‌ ವೆಜ್‌ ತಿನ್ನೋಲ್ವಂತೆ; ಪತ್ನಿ ಉಷಾ ಈ ಬಗ್ಗೆ ಹೇಳಿದ್ದೇನು..?

ಬೆಂಗಳೂರು; ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಲವು ಇಂಟ್ರೆಸ್ಟಿಂಗ್‌ ವಿಚಾರಗಳನ್ನು ಹೇಳಿದ್ದಾರೆ. ಅವರು ಮಾಂಸಾಹಾರ ಸೇವೆನೆ ಮಾಡೋದಿಲ್ಲವಂತೆ. ಜೈಲಿನಿಂದ ಹೊರಬಂದ ಮೇಲೆ ಅವರು ಮಾಂಸಾಹಾರವನ್ನು ಪೂರ್ತಿಯಾಗಿ ಬಿಟ್ಟಿದ್ದಾರಂತೆ. 

ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್‌  ಹಲವು ಕುತೂಹಲದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಅವರ ಕುಟುಂಬದ ಸದಸ್ಯರು ಕೂಡಾ ಹಲವು ವಿಚಾರಗಳನ್ನು ಹೇಳಿದ್ದಾರೆ. ಮಶ್ರೂಮ್ ಮತ್ತು ಕಡೆಲೆಕಾಯಿ ಅಂದರೆ ಡಿಕೆಶಿಗೆ ಪ್ರಾಣ ಎಂದು ಡಿಕೆಶಿ ಪತ್ನಿ ಉಷಾ ತಿಳಿಸಿದ್ದಾರೆ.  ಹೊರಗಡೆ ಅವರು ತುಂಬಾ ಟಫ್ ವ್ಯಕ್ತಿ, ಆದರೆ ಮನೆಯಲ್ಲಿ ಅವರು ತುಂಬಾ ಎಮೋಷನಲ್ ಎಂದೂ ಉಷಾ ಅವರು ಹೇಳಿದ್ದಾರೆ.

 

Share Post