ಶಕ್ತಿ ಯೋಜನೆ ಎಫೆಕ್ಟ್; ಎಲ್ಲಾ ಬಸ್‌ಗಳೂ ಹೌಸ್‌ಫುಲ್
ಬೆಂಗಳೂರು; ನಿನ್ನೆಯಷ್ಟೇ ರಾಜ್ಯ ಸರ್ಕಾರ ಶಕ್ತಿ ಯೋಜನೆಗೆ ಚಾಲನೆ ನೀಡಿತ್ತು. ನಿನ್ನೆಯಿಂದಲೇ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಮಹಿಳೆಯರು ಹೆಚ್ಚು ಪ್ರಯಾಣ ಮಾಡುತ್ತಿದ್ದಾರೆ. ಎಲ್ಲಾ ಬಸ್‌ಗಳಲ್ಲೂ ಪ್ರಯಾಣಿಕರು ತುಂಬಿ ತುಳುಕುತ್ತಿದ್ದಾರೆ. ಹೀಗಾಗಿ, ಬಸ್‌ನಲ್ಲಿ ಹತ್ತಲಾಗದೆ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಕೆಲಸಕ್ಕೆ ಹೋಗುವವರು, ಕಾಲೇಜು ವಿದ್ಯಾರ್ಥಿಗಳು ಸೂಕ್ತ ಸಮಯಕ್ಕೆ ಬಸ್ ಸಿಗದೇ ಪರದಾಡುವಂತಾಗಿದೆ. ಡೋರ್‌ನಲ್ಲಿ ನಿಂತು ಪ್ರಯಾಣಿಸುತ್ತಿರುವ ದೃಶ್ಯಗಳೂ ಎಲ್ಲಾ ಕಡೆ ಕಂಡುಬರುತ್ತಿವೆ. ಶಕ್ತಿ ಯೋಜನೆ ಜಾರಿಯಾದ ಮೇಲೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರೂ ಬಸ್‌ಗೆ ಬರುತ್ತಿದ್ದಾರೆ. ಇದರಿಂದಾಗಿ ಎಲ್ಲರೂ ತೊಂದರೆ ಅನುಭವಿಸುವಂತಾಗಿದೆ.