ಬಿಜೆಪಿ ಸರ್ಕಾರದಲ್ಲಿ ಆರ್‌ಎಸ್‌ಎಸ್‌ಗೆ ಭೂಮಿ; ಪರಿಶೀಲನೆಗೆ ಮುಂದಾದ ಕಾಂಗ್ರೆಸ್ ಸರ್ಕಾರ
ದೇವನಹಳ್ಳಿ; ಆರ್‌ಎಸ್‌ಎಸ್ ಹಾಗೂ ಅದರ ಅಂಗಸಂಸ್ಥೆಗಳಿಗೆ ಬಿಜೆಪಿ ಸರ್ಕಾರದಲ್ಲಿ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಲಾಗಿದೆ. ಇದನ್ನು ಪರಿಶೀಲಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಹೀಗೆ ಹಂಚಿಕೆ ಮಾಡಿದ ವಿವಾದಿತ ಭೂಮಿಯನ್ನು ಪಟ್ಟಿ ಮಾಡಿ ಶಾರ್ಟ್ ಲಿಸ್ಟ್ ಮಾಡಲು ಶುರು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ದೇವನಹಳ್ಳಿಯ ಹರಳೂರಿನಲ್ಲಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಶಿಕ್ಷಣ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರಕ್ಕೆ (ಸೆಸ್) 116 ಎಕರೆ ಭೂಮಿ ನೀಡಲಾಗಿದೆ. ಬೈಯಪ್ಪನಹಳ್ಳಿ ಬಳಿ ರಾಷ್ಟ್ರೋತ್ಥಾನ ಪರಿಷತ್ತಿಗೆ ಶೈಕ್ಷಣಿಕ ಉದ್ದೇಶಗಳಿಗಾಗಿ 8 ಎಕರೆ 32 ಗುಂಟೆ ಭೂಮಿ ಮಂಜೂರು ಮಾಡಲಾಗಿದೆ. ಕಲಬುರಗಿ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಆನೇಕಲ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೂಡಾ ರಾಷ್ಟ್ರೋತ್ಥಾನ ಪರಿಷತ್ತಿಗೆ ಭೂಮಿ ನೀಡಲಾಗಿದೆ. ಚನ್ನೇನಹಳ್ಳಿಯಲ್ಲಿ ಜನ ಸೇವಾ ಟ್ರಸ್ಟ್ ಹೆಸರಿನ ಸಂಸ್ಥೆಗೆ ಮಂಜೂರಾಗಿದ್ದ 40.07 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಹೀಗೆ ಹಲವು ಜಮೀನುಗಳ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲು ಮುಂದಾಗಿದೆ.