ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ರಾಜ್ಯಸಭಾ ಸದಸ್ಯ ಜಗ್ಗೇಶ್ ದಂಪತಿ
ಬೆಂಗಳೂರು; ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಅವರ ಪತ್ನಿ ಪರಿಮಳಾ ಕೂಡಾ ಜೊತೆಗಿದ್ದರು.
ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಜಗ್ಗೇಶ್ ದಂಪತಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು. ಇದೇ ವೇಳೆ ಮಾತನಾಡಿರುವ ಜಗ್ಗೇಶ್, ಡಿ.ಕೆ.ಶಿವಕುಮಾರ್ ಅವರು ನನ್ನ ಸ್ನೇಹಿತರು. ಹೀಗಾಗಿ ಅಭಿನಂದನೆ ಸಲ್ಲಿಸಲು ಬಂದಿದ್ದೇವೆ ಎಂದು ಹೇಳಿದ್ದಾರೆ.