BengaluruCinema

ಡೇರ್‌ ಡೆವಿಲ್‌ ಮುಸ್ತಫಾ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು; ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕೃತಿ ಆಧಾರಿತ ಡೇರ್‌ ಡೆವಿಲ್‌ ಮುಸ್ತಫಾ ಚಿತ್ರಕ್ಕೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ. ಕೋಮು ಸಾಮರಸ್ಯ ಹಾಗೂ ಭಾವೈಕ್ಯತೆ ಸಂದೇಶ ಸಾರುವ ಈ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್‌ ಸಿಕ್ಕಿದೆ. ಇದು ಇನ್ನೂ ಕನ್ನಡಿಗರೆಲ್ಲರಿಗೂ ಮುಟ್ಟಲಿ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದೆ.

ನಿನ್ನೆಯಷ್ಟೇ ಚಿತ್ರ ತಂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ, ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.

 

Share Post