ಆಗಸ್ಟ್ 18ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲಿದೆ; ಲಕ್ಷ್ಮೀ ಹೆಬ್ಬಾಳ್ಕರ್
ಚಿಕ್ಕಮಗಳೂರು; ಆಗಸ್ಟ್ 18ರಂದು ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರ ಖಾತೆ ಮೊದಲ ಕಂತಿನ ಹಣ ಹಾಕಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕೊಪ್ಪ ತಾಲ್ಲೂಕಿನ ಗೌರಿಗದ್ದೆ ದತ್ತಾಶ್ರಮದಲ್ಲಿ ಅವರು ಮಾತನಾಡಿದರು.
ತಾಂತ್ರಿಕ ತೊಂದರೆಯಿಂದ ಯೋಜನೆಗೆ ಅರ್ಜಿ ಹಾಕಲು ಕೊಂಚ ತಡವಾಗುತ್ತಿದೆ. ಆದ್ರೆ ಮೊದಲೇ ಹೇಳಿದಂತೆ ಆಗಸ್ಟ್ ತಿಂಗಳಲ್ಲಿ ಮೊದಲ ಕಂತನ್ನು ಗೃಹಲಕ್ಷ್ಮಿಯರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಆಗಸ್ಟ್ 17 ಅಥವಾ 18ರಂದು ಎಲ್ಲರ ಖಾತೆಗಳಿಗೆ ಹಣ ವರ್ಗಾವಣೆಯಾಗಲಿದೆ ಎಂದು ಹೇಳಿದರು.
ಗೃಹ ಲಕ್ಷ್ಮಿ ಯೋಜನೆ ಜನರಿಗೆ ಸರಳವಾಗಿ ಸಿಗಬೇಕು ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅಧಿಕಾರಿಗಳಿಗೆ ಕೆಲ ಬದಲಾವಣೆಗಳ ಬಗ್ಗೆ ಸೂಚನೆಯನ್ನು ಕೊಟ್ಟಿದ್ದೇವೆ. ಗ್ರಾಮ 1, ಕರ್ನಾಟಕ 1 ಹಾಗೂ ಬೆಂಗಳೂರು 1 ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಜೊತೆಗೆ ಮೊಬೈಲ್ ಹಾಗೂ ನಿಮ್ಮದೇ ಡೆಸ್ಕ್ ಟಾಪ್ ಅಥವಾ ಲ್ಯಾಪ್ಟಾಪ್ ಬಳಲಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಸಚಿವರು ತಿಳಿಸಿದರು.