Bengaluru

ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಕಚೇರಿ, ಕೆಲಸಗಳಿಗೆ ಹೊರಟವರ ಪರದಾಟ

ಬೆಂಗಳೂರು; ಬೆಂಗಳೂರಿನಲ್ಲಿ ಬೆಳಗ್ಗೆಯೇ ಶುರುವಾಗಿದ್ದ ಜಿಟಿಜಿಟಿ ಮಳೆ ಇದ್ದಕ್ಕಿದ್ದಂತೆ ಜೋರಾಗಿದೆ. ಮೆಜೆಸ್ಟಿಕ್‌ ಸುತ್ತಮುತ್ತ ಭಾರಿ ಮಳೆಯಾಗಿದೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. 

ಮೆಜೆಸ್ಟಿಕ್​​, ಮಲ್ಲೇಶ್ವರ, ಶೇಷಾದ್ರಿಪುರ, ವಿಧಾನಸೌಧ, ಕಾರ್ಪೊರೇಷನ್ ಸರ್ಕಲ್, ಶಿವಾಜಿನಗರ, ಕೆ.ಆರ್.ಮಾರ್ಕೆಟ್​, ಮೈಸೂರು ರಸ್ತೆ, ಮಾಗಡಿ ರಸ್ತೆ, ವಿಜಯನಗರ, ಜಯನಗರ,ರಾಜಾಜಿನಗರ, ಯಶವಂತಪುರ, ಚಂದ್ರಾಲೇಔಟ್, ನಂದಿನಿ ಲೇಔಟ್ ಮುಂತಾದ ಕಡೆ ಭಾರಿ ಮಳೆಯಾಗಿದೆ.

ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಜನರು ಪರದಾಡಿದ್ದಾರೆ. ಇನ್ನೂ ಮೂರು ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಮಳೆಯಿಂದಾಗಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ.

 

Share Post