BengaluruPolitics

ಅಕ್ಕಿ ನೀಡಿದ ಕೇಂದ್ರ ಸರ್ಕಾರ; ಕಾಂಗ್ರೆಸ್‌ನಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

ಬೆಂಗಳೂರು; ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ. ಕೇಂದ್ರದ ಬಳಿ ಅಕ್ಕಿ ಇದ್ದರೂ ಕೂಡಾ ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಇಂದು ಪ್ರತಿಭಟನೆ ನಡೆಸುತ್ತಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗಿದೆ. ಎಲ್ಲಾ ಕಡೆ ಸಾವಿರಾರು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರದ ದೋರಣೆ ವಿರುದ್ಧ ಘೋಷಣೆ ಕೂಗಿದರು.

ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೂಡಾ ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಇಂದು ಬೆಳಗ್ಗೆ ಮಳೆಯಾಗಿದೆ. ಇದರ ನಡುವೆಯೂ ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಘೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

Share Post