ಲೋಕಸಭಾ ಚುನಾವಣೆಗೆ ತಯಾರಿ; ವಿಪಕ್ಷಗಳಿಂದ ಮಹತ್ವದ ಸಭೆ
ನವದೆಹಲಿ; 2024ರ ಲೋಕಸಭೆ ಚುನಾವಣೆ ಗೆಲ್ಲಲು ವಿರೋಧ ಪಕ್ಷಗಳು ಈಗಲೇ ಸರ್ಕಸ್ ಶುರು ಮಾಡಿದೆ. ಬಿಜೆಪಿಯನ್ನು ಸೋಲಿಸಲು ತಂತ್ರಗಾರಿಕೆಯನ್ನು ಈಗಿನಿಂದಲೇ ಶುರು ಮಾಡಿವೆ. ಸಮಾನ ಮನಸ್ಕ ವಿಪಕ್ಷಗಳೆಲ್ಲಾ ಸೇರಿ ಬಿಜೆಪಿ ವಿರುದ್ಧ ಹೋರಾಡಲು ಯೋಜನೆ ರೂಪಿಸುತ್ತಿವೆ. ಇದರ ಭಾಗವಾಗಿ ಇಂದು ಬಿಹಾರದ ಪಾಟ್ನಾದಲ್ಲಿ ಸಭೆ ನಡೆಸಲಾಗುತ್ತಿದೆ. ಬಿಜೆಪಿ ವಿರುದ್ಧದ ಬಹುತೇಕ ಎಲ್ಲ ವಿಪಕ್ಷಗಳ ನಾಯಕರೂ ಈ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಬಿಹಾರ ಸಿಎಂ ನಿತೀಶ್ ಕುಮಾರ್ ಸಭೆಯ ನೇತೃತ್ವ ವಹಿಸಿಕೊಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಟಿಎಂಸಿ ನಾಯಕಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಎನ್‍ಸಿಪಿ ನಾಯಕ ಶರದ್ ಪವಾರ್, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ, ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.