ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ; ಬಂದಿದೆ ಮೊಬೈಲ್ ಆ್ಯಪ್
ಮೈಸೂರು; ಮನೆಯೊಡತಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಜೂನ್ 27ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಹೊಸ ಮೊಬೈಲ್ ಅಪ್ಲಿಕೇಷನ್ ರೆಡಿಯಾಗಿದೆ. ಯಾವುದೇ ಗೊಂದಲ ಹಾಗೂ ಸಮಸ್ಯೆ ಇಲ್ಲದೆ ನೋಂದಣಿ ಮಾಡಿಕೊಳ್ಳಬಹುದು. ಸೇವಾ ಸಿಂಧು ವೆಬ್‌ಸೈಟ್ ಹಾಗೂ ಮೊಬೈಲ್ ಅಪ್ಲಿಕೇಷನ್ ಎರಡರ ಮೂಲಕವೂ ಅರ್ಜಿ ಸಲ್ಲಿಸಬಹುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಜೂನ್ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದೆ. ಜನರು ಅರ್ಜಿ ಸಲ್ಲಿಕೆಗೆ ಯಾರಿಗೂ ಹಣ ಪಾವತಿಸಬೇಡಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಆಗಸ್ಟ್ 16 ಅಥವಾ 17ರಂದು ಫಲಾನುಭವಿಗಳು ಖಾತೆಗೆ ಮೊದಲ ಕಂತು ವರ್ಗಾವಣೆಯಾಗಲಿದೆ. ಯಾರು ಏನೇ ತೊಂದರೆ ಕೊಟ್ಟರೂ ನಮ್ಮ ಗ್ಯಾರೆಂಟಿ ಯೋಜನೆಗಳನ್ನೆಲ್ಲಾ ಜಾರಿಗೆ ತಂದೇ ತರುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದರು.