DistrictsPolitics

ಪ್ರಧಾನಿ ಮೋದಿ ಸೋಲಲ್ಲ, ರಾಹುಲ್‌ ಗಾಂಧಿ ಮದುವೆಯಾಗಲ್ಲ; ಮಾಜಿ ಸಿಎಂ ಬೊಮ್ಮಾಯಿ

ಬೆಳಗಾವಿ; ಯಾವ ಕಾರಣಕ್ಕೂ ಮೋದಿ ಸೋಲೋದಿಲ್ಲ. ಹಾಗೆಯೇ ರಾಹುಲ್‌ ಗಾಂಧಿಗೆ ಮದುವೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬೊಮ್ಮಾಯಿ ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ಲೋಕಸಭಾ ಚುನಾವಣೆಯೇ ಬೇರೆ, ವಿಧಾನಸಭಾ ಚುನಾವಣೆಯೇ ಬೇರೆ. ಪ್ರಧಾನಿ ಮೋದಿಯವರ ಬಗ್ಗೆ ಎಲ್ಲರಿಗೂ ಹೆಮ್ಮೆ ಇದೆ. ದೇಶದಲ್ಲಿ ಕೇಂದ್ರ ಸರ್ಕಾರದಿಂದ 12 ಕೋಟಿ ಶೌಚಾಲಯಗಳನ್ನು ಕಟ್ಟಿಸಲಾಗಿದೆ. ಪ್ರತಿ ಮನೆಗು ಕುಡಿಯುವ ಪೂರೈಕೆ ಮಾಡಲಾಗಿದೆ. ಹೀಗಾಗಿ ಈ ಬಾರಿಯೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ. ಅದಕ್ಕಾಗಿ ಕಾರ್ಯಕರ್ತರು ಸಂಕಲ್ಪ ತೊಡಬೇಕು ಎಂದು ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ನಾವು ಕೂಡಾ ಸಮರ್ಥವಾಗಿ ಕೆಲಸ ಮಾಡಿದ್ದೆವು. ರಾಜ್ಯದ ಪ್ರಗತಿಗಾಗಿ ಶ್ರಮಿಸಿದ್ದೆವು. ಆದ್ರೂ ಸೋಲಾಗಿದೆ. ಅದರ ಹೊಣೆ ನಾನೇ ಹೊರುತ್ತೇನೆ ಎಂದು ಬೊಮ್ಮಾಯಿ ಇದೇ ವೇಳೆ ಹೇಳಿದರು.

Share Post